ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಶೋಕಿ ಜೀವನ ನಡೆಸಲು ಮೋನಿಕಾ ಎಂಬ ಮಹಿಳೆ ತನ್ನ ಮನೆ ಮಾಲಿಕಳಾದ ದಿವ್ಯಾ ಎಂಬುವಳನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಾಲ ತೀರಿಸಲು ಮನೆ ಮಾಲಕಿ ದಿವ್ಯಾ ಎಂಬುವಳನ್ನು ಕೊಲೆ ಮಾಡಿರುವ ಘಟನೆ ಮೇ 10 ರಂದು ನಡೆದಿದೆ. ಮೋನಿಕಾ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರ ಕಸಿದುಕೊಂಡಿದ್ದಾಳೆ. ಸದ್ಯ ಪ್ರಕರಣ ದಾಖಲಿಸಿದ ಕೆಂಗೇರಿ ಪೊಲೀಸರು ಮೋನಿಕಾಳನ್ನು ಬಂಧಿಸಿದ್ದಾರೆ.
ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡಿದ್ದ ಮೋನಿಕಾ, ಮೂಲತಃ ಕೋಲಾರ ಜಿಲ್ಲೆಯವಳು. ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬುವವರ ಮನೆಗೆ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಪ್ರಿಯಕರನನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿಕೊಂಡಿದ್ದಳು. ಆದರೆ ಒಬ್ಬಂಟಿಯಾಗಿ ವಾಸವಿದ್ದ ಮೋನಿಕಾ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ. ಅತ್ತ ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳು. ಜೊತೆಗೆ ಪ್ರಿಯಕರನಿಗೆ ಟಾಟಾ ಎಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಮೋನಿಕಾ ಕಣ್ಣು ಬಿದ್ದಿತ್ತು. ದಿವ್ಯಾ ಹಾಗೂ ಮಗು ಮಾತ್ರ ಮನೆಯಲ್ಲಿರುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದು ಕುತ್ತಿಗೆ ಹಿಸುಕಿ ಮೋನಿಕಾ ದಿವ್ಯಾಳ ಕೊಲೆ ಮಾಡಿದ್ದಾಳೆ. ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ