Kannada NewsKarnataka NewsLatest

*ಜಂಬೂಸವಾರಿಗೆ ಅದ್ಧೂರಿ ಚಾಲನೆ ನೀಡಿದ ಸಿಎಂ: ಅಂಬಾರಿಯಲ್ಲಿ ವಿರಾಜಮಾನವಾದ ಚಾಮುಂಡಿ ತಾಯಿ ಹೊತ್ತು ರಾಜ ಗಾಂಭೀರ್ಯದಲ್ಲಿ ಸಾಗಿದ ಅಭಿಮನ್ಯು*

ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ವಿಜಯದಶಮಿ ದಿನವಾದ ಇಂದು ಜಂಬೂಸವಾರಿ ಮೆರವಣಿಗೆ ಅದ್ಧೂರು ಚಾಲನೆ ದೊರೆತಿದೆ. ಮುಖ್ಯಂತ್ರಿ ಸಿದ್ದರಾಮಯ್ಯ ಚಿನ್ನದ ಅಂಬಾರಿಯಲ್ಲಿ ಅರ್ಜುನ ಆನೆ ಮೇಲೆ ವಿರಾಜಮಾನವಾದ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

Home add -Advt

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಸ್ತಬಬ್ಧಚಿತ್ರಗಳ ಮೆರವಣಿಗೆ, ಕಲಾತಂಡಗಳ ಮೆರೆವಣಿಗೆಗೆ ಚಾಲನೆ ದೊರೆತಿತ್ತು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡ ಅದಿದೇವತೆ ಚಾಮುಂಡಿ ತಾಯಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ನೀಡಿದರು. ಸಂಜೆ 4:42ರಿಂದ 5:06ರ ನಡುವೆ ಸಲ್ಲುವ ಶುಭ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಚಾಲನೆ ದೊರೆತಿದೆ. ರಾಜವಂಶಸ್ಥ ಯದುವೀರ್ ಒಡೆಯರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಹೆಚ್.ಸಿ.ಮಹದೇವಪ್ಪ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಗಣ್ಯರು ತಾಯಿ ಚಾಮುಂಡಿ ಮಾತೆಗೆ ಪುಷ್ಪಾರ್ಚನೆ ಮಾಡಿದರು.

ಕ್ಯಾಪ್ಟನ್ ಅಭಿಮನ್ಯು ಆನೆ 6ನೇ ಬಾರಿಗೆ ತಾಯಿ ಚಾಮುಂಡಿ ದೇವಿ ವಿರಾಜಮಾನವಿಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ರಾಜ ಗಾಂಭೀರ್ಯಯ್ದಲ್ಲಿ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ್ದಾನೆ. ಅಭಿಮನ್ಯುಗೆ ಕುಮ್ಕಿ ಆನೆಗಳು ಇತರ ಆನೆಗಳು ಸೇರಿ ೧೪ ಆನೆಗಳು ಸಾಥ ನೀಡಿವೆ.

120ಕ್ಕೂ ಹೆಚ್ಚು ಕಲಾತಂಡಗಳು, ವಿವಿಧ ಜಿಲ್ಲೆಗಳ 58 ಸ್ತಬ್ಧಚಿತ್ರಗಳು ಅಶ್ವಾರೋಹಿದಳ, ವಾದ್ಯ ತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ಅರಮನೆಯಿಂದ ಆಂರಭವಾಗಿರುವ ಜಂಬೂಸವಾರಿ ಮೆರವಣಿಗೆ ಬನ್ನಿಮಂಟಪದವರೆಗೂ ಸಾಗಲಿದೆ.


Related Articles

Back to top button