Belagavi NewsBelgaum NewsKannada NewsKarnataka NewsNationalPolitics

*ಹೊತ್ತಿ ಉರಿದ ಪ್ಯಾಸೆಂಜರ್ ರೈಲು*

ಪ್ರಗತಿವಾಹಿನಿ ಸುದ್ದಿ: ಖಾಲಿ ಪ್ಯಾಸೆಂಜರ್ ರೈಲಿನ ಬೋಗಿಗೆ ಇಂದು ಬೆಳ್ಳಂ ಬೆಳಗ್ಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಗಳು ತಿಳಿಸಿವೆ. 

ಪಶ್ಚಿಮ ಬಂಗಾಳದ ಪೂರ್ವ ವರ್ಧಮಾನ್ ಜಿಲ್ಲೆಯ ಕಟ್ವಾ ರೈಲು ನಿಲ್ದಾಣದಲ್ಲಿ ಈ ಅವಘಡ ಸಂಭವಿಸಿದ್ದು, 2ನೇ ಪ್ಲಾಟ್‌ಫಾರ್ಮ್‌ನಲ್ಲಿ ನಿಂತಿದ್ದ ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಯಲ್ಲಿ ಬೆಳಗಿನ ಜಾವ 4:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರೈಲಿನ ಬೋಗಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಗಮನಿಸಿದ ಪ್ರಯಾಣಿಕರು ತಕ್ಷಣವೇ ಮಾಹಿತಿ ನೀಡಿದರು. ಬೇರೆ ಬೋಗಿಗಳಿಗೆ ಬೆಂಕಿ ಹರಡುವುದನ್ನು ತಡೆಯಲು ತಕ್ಷಣವೇ ಬೋಗಿಯನ್ನು ರೈಲಿನಿಂದ ಬೇರ್ಪಡಿಸಲಾಯಿತು. ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button