
ಪ್ರಗತಿವಾಹಿನಿ ಸುದ್ದಿ: ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಾಗಿದೆ.
ಎ.ಆರ್.ರೆಹಮಾನ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಯಲ್ಲಿ ಅವರಿಗೆ ಆಂಜಿಯೋಗ್ರಾಮ್ ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.