Belagavi NewsBelgaum NewsKannada NewsKarnataka News

*ಬೆಳಗಾವಿ: ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ*

ಪ್ರಗತಿವಾಹಿನಿ ಸುದ್ದಿ: ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ಮಗುವೊಂದು ಬಲಿಯಾಗಿದೆ. ಮೂರು ವರ್ಷದ ಮಗುವಿನ ಎದೆಮೇಲೆ ಕಾಲಿಟ್ಟು ವ್ಯಕ್ತಿಯೋರ್ವ ಮಗುವನ್ನು ಹತ್ಯೆಗೈದಿರುವ ಅಮಾನುಷ ಘಟನೆ ನಡೆದಿದೆ.

Home add -Advt

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ಈ ಕೃತ್ಯವೆಸಗಲಾಗಿದ್ದು, ಈಡೀ ರಾಜ್ಯವೇ ಬೆಚ್ಚಿ ಬಿದ್ದಿದೆ.

ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ಮಗು. ಜೋತಿಭಾ ತುಕಾರಾಮ ಬಾಬರ ಮಗುವನ್ನೇ ಕೊಂದ ಆರೋಪಿ. ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ವೇಳೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ರಾಕ್ಷಸನಂತೆ ವರ್ತಿಸಿ ಕೊಂದಿದ್ದಾನೆ ಎಂದು ಮೃತ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಈ ಸಂಬಂಧ ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.

Related Articles

Back to top button