Karnataka News

*ಇನ್ನೆರೆಡು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ : ಬಿರುಬೇಸಿಗೆಯ ರಣಧಗೆಗೆ ಕರುನಾಡು ತತ್ತರಿಸಿದ್ದು ರಾಜ್ಯದ ವಿವಿಧ ಭಾಗಗಳಲ್ಲಿ ಪೂರ್ವ ಮುಂಗಾರು ಚುರುಕುಗೊಂಡಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಇನ್ನೆರಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕೆಲ ಕಡೆ ಚದುರಿದ ಮಳೆಯಾಗುವ ಸಂಭವವಿದೆ ಎಂದು ವರದಿ ತಿಳಿಸಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಜತೆ ಸಾಧಾರಣ ಮಳೆಯಾಗಲಿದೆ.

Home add -Advt

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Related Articles

Back to top button