
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನಿಡಸೋಸಿಯ ಜಗದ್ಗುರು ಪಂಚಮ ನಿಜಲಿಂಗೇಶ್ವರ ಕಾಲೇಜಿನ ವಿದ್ಯಾರ್ಥಿ ಕಾಲೇಜಿನ ಆವರಣದಲ್ಲಿ ಇರುವ ಹಾಸ್ಟೆಲ್ ನ ರೂಮ್ ನಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ಮಹಾರಾಷ್ಟ್ರದ ಸಾಂಗ್ಲಿ ಮೂಲದ ಮಯೂರ ಕುಂಬಾರ (17) ಎಂಬ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ. ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಪೋಷಕರು ಬಂದ ನಂತರ ಮರಣೋತ್ತರ ಪರೀಕ್ಷೆಗೆ ಮೃತ ದೇಹ ಕಳುಹಿಸಲಾಗುತ್ತದೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ