Karnataka News

*ಪರೀಕ್ಷೆ ಬರೆಯಲು ತೆರಳಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು*

ಪ್ರಗತಿವಾಹಿನಿ ಸುದ್ದಿ: ಹೆದ್ದಾರಿ ಬದಿಯಲ್ಲಿ ನಿಂದಿದ್ದ ಲಾರಿಗೆ ಬೈಕ್‌ ಡಿಕ್ಕಿ ಹೊಡೆದು ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಶಿರಸಿಯ ಹಾರುಗಾರ ಬಳಿ ನಡೆದಿದೆ.

ಶಿರಸಿ ಎಂ.ಇ.ಎಸ್.ಆರ್.ಎನ್ ಶೆಟ್ಟಿ ಪಾಲಿಟೆಕ್ನಿಕ್‌ ಮಹಾವಿದ್ಯಾಲಯ ಮೊದಲ ವರ್ಷದ ಇಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾರ್ಥಿ ಮನೋಜ್ ಜಿ ಹೆಗಡೆ ಮೃತ ವಿದ್ಯಾರ್ಥಿಯಾಗಿದ್ದಾನೆ.

Home add -Advt

ಬೆಳಗ್ಗೆ ಪರೀಕ್ಷೆ ಬರೆಯಲು ಮನೆಯಿಂದ ಶಿರಸಿಗೆ ಬರುತ್ತಿದ್ದ ಸಂದರ್ಭದಲ್ಲಿ ರಸ್ತೆಯ ಬದಿಯಲ್ಲಿ ನಿಲ್ಲಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದಾಗಿ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾನೆ. ಶಿರಸಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button