Kannada NewsKarnataka NewsNational

*ಮಹಿಳಾ ಹೆಡ್ ಕಾನ್‌ಸ್ಟೆಬಲ್​​​ಗೆ ಗನ್ ತೋರಿಸಿ ಅತ್ಯಾಚಾರ ಮಾಡಿದ ಸಬ್ ಇನ್ಸ್‌ಪೆಕ್ಟರ್*

ಪ್ರಗತಿವಾಹಿನಿ ಸುದ್ದಿ: ತೆಲಂಗಾಣದ ಭೂಪಾಲಪಲ್ಲಿ ಜಿಲ್ಲೆಯಲ್ಲಿ ಮಹಿಳಾ ಹೆಡ್ ಕಾನ್‌ಸ್ಟೆಬಲ್​​​ಗೆ ಗನ್ ತೋರಿಸಿ ಅತ್ಯಾಚಾರ ಮಾಡಲಾಗಿದೆ. ಜಿಲ್ಲೆಯ ಕಾಳೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭವಾನಿ ಸೇನ್ ಎಂಬು ಸಬ್ ಇನ್ಸ್‌ಪೆಕ್ಟರ್ ಈ ಕೃತ್ಯವನ್ನು ಮಾಡಿದ್ದಾನೆ ಎಂದು ಹೇಳಲಾಗಿದೆ. 

Home add -Advt

ಎಸ್‌ಐ ರಿವಾಲ್ವರ್ ತೋರಿಸಿ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ನಂತರ ಈ ವಿಚಾರವನ್ನು ಯಾರಿಗೂ ಹೇಳಬಾರದು ಎಂದು ಬೆದರಿಕೆ ಹಾಕಿದ್ದಾನೆ ಎಂದು ಹೆಡ್ ಕಾನ್‌ಸ್ಟೆಬಲ್ ಆರೋಪಿಸಿದರು.

ಮಹಿಳಾ ಹೆಡ್ ಕಾನ್‌ಸ್ಟೆಬಲ್ ದೂರಿನ ಆಧಾರ ಮೇಲೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನ್ನು ಬಂಧಿಸಲಾಗಿದೆ. ಆರೋಪಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಈ ಪ್ರಕರಣ ಸಂಬಂಧ ತನಿಕೆ ನಡೆಸಿರುವ ಪೊಲೀಸರು, ಮಹಿಳಾ ಹೆಡ್ ಕಾನ್‌ಸ್ಟೆಬಲ್ ಮಾಡಿರುವ ಆರೋಪ ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಸಬ್ ಇನ್ಸ್ ಪೆಕ್ಟರ್ ಭವಾನಿ ಸೇನ್ ವಿರುದ್ಧದ ಆರೋಪವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಮಹಾನಿರೀಕ್ಷಕ (ಮಲ್ಟಿ ಝೋನ್ -1) ಎ.ವಿ.ರಂಗನಾಥ್, ಭವಾನಿ ಸೇನ್ ಅವರನ್ನು ಸೇವೆಯಿಂದ ಶಾಶ್ವತವಾಗಿ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಾನ್‌ಸ್ಟೆಬಲ್ ದೂರಿನ ಆಧಾರದ ಮೇಲೆ ಎಸ್‌ಐ ವಿರುದ್ಧ ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾರ್ವಜನಿಕರನ್ನು ರಕ್ಷಣೆ ಮಾಡುವ ಪೊಲೀಸರ ಮೇಲೆಯೇ ಅತ್ಯಾಚಾರ ಆಗಿರುವ ಅವಮಾನೀಯ ಘಟನೆಯಿಂದ ಸಾರ್ವಜಕರಲ್ಲಿ ಆತಂಕ ಮನೆ ಮಾಡಿದೆ. 

Related Articles

Back to top button