Latest

*ದೆಹಲಿಯಲ್ಲಿ BJPಗೆ ಸೇರ್ಪಡೆಯಾದ ಎ.ಟಿ.ರಾಮಸ್ವಾಮಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ನಿನ್ನೆಯಷ್ಟೇ ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎ.ಟಿ.ರಾಮಸ್ವಾಮಿ ಇಂದು ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

Home add -Advt

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಮಸ್ವಾಮಿ, ಯಾವುದೇ ಷರತ್ತು ಹಾಕದೇ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪ್ರಧಾನಿ ಮೋದಿ ಅವರ ಅಭಿವೃದ್ಧಿ ಕೆಲಸ ನೋಡಿ ಬಿಜೆಪಿಗೆ ಸೇರಿದೇನೆ. ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಅವರ ಆಶಿರ್ವಾದ ಪಡೆಯುತ್ತೇನೆ ಎಂದು ಹೇಳಿದರು.

https://pragati.taskdun.com/it-will-rain-for-three-days-from-today-in-different-parts-of-the-state/


Related Articles

Back to top button