Politics

*ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಶಾಸಕ*

ಬೆಂಗಳೂರು: ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ನೀಡುವುದಾಗಿ ತಿಳಿಸಿದ್ದಾರೆ.

ತಾವು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು, ಇನ್ಮುಂದೆ ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಾಗಿ ತಿಳಿಸಿದ್ದಾರೆ.

Home add -Advt

ಕಳೆದ ವಿಧಾನಸಭಾ ಚುನಾವಣೆ ವೇಳೆ ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ ವಿಚಾರವಾಗಿ ಅಸಮಾಧಾನಗೊಂಡು ಬಿಜೆಪಿ ಕಾರ್ಯಚಟುವಟಿಕೆಗಳಿಂದಲೂ ದೂರ ಇದ್ದರು. ಇದೀಗ ರಾಜೀನಾಮೆ ನೀಡಿದ್ದಾರೆ.

ಪರಿಸರ ಉಳಿಸಿದರೆ ಜೀವ ಸಂಕುಲಗಳು ಉಳಿಯುತ್ತವೆ. ತಾಪಮಾನ ಹೆಚ್ಚಲವಾಗುತ್ತಿದೆ. ಹವಾಮಾನದಲ್ಲಿ ಅಸಮತೋಲನವುಂಟಾಗಿದೆ. ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಆಹಾರವೂ ವಿಷಪೂರಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ ಪರಿಸರ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ. ಈ ಸನ್ನಿವೇಶದಲ್ಲಿ ರಾಜಕಾರಣಕ್ಕಿಂತ ಪರಿಸರ ಸಂರಕ್ಷಣೆ ಮತ್ವದ್ದಾಗಿದೆ. ನನ್ನ ಪೂರ್ಣ ಸಮಯವನ್ನು ಕೃಷಿ ಜೊತೆಗೆ, ಪರಿಸರ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ರಾಮಸ್ವಾಮಿ ತಿಳಿಸಿದ್ದಾರೆ.

Related Articles

Back to top button