Kannada NewsKarnataka NewsLatest

ಧ್ವಜಾರೋಹಣಕ್ಕೆ ತೆರಳುತ್ತಿದ್ದ ಶಿಕ್ಷಕ ಅಪಘಾತದಲ್ಲಿ ಸಾವು

ಪ್ರಗತಿವಾಹಿನಿ ಸುದ್ದಿ, ಕುಮಟಾ: ಸ್ವಾತಂತ್ರ್ಯೋತ್ಸವ ನಿಮಿತ್ತ ಧ್ವಜಾರೋಹಣಕ್ಕೆ ತೆರಳುತ್ತಿದ್ದ ಶಿಕ್ಷಕರೊಬ್ಬರು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೆಗಡೆಯ ಮೇಲಿನಕೇರಿ ನಿವಾಸಿ ಗೋಪಾಲ ಪಟಗಾರ (50) ಮೃತಪಟ್ಟವರು. ಗುಡೆಅಂಗಡಿ ಶಾಲಾ ಶಿಕ್ಷಕರಾದ ಅವರು ಧ್ವಜಾರೋಹಣದಲ್ಲಿ ಪಾಲ್ಗೊಳ್ಳಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅತಿ ವೇಗದಿಂದ ಬಂದ ಬೊಲೆರೊ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು.

ಕುಮಟಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Home add -Advt

Related Articles

Back to top button