ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಬೆಂಗಳೂರಿನ ರಾಜಾಜಿನಗರದ ಬಳಿ ಸ್ವಲ್ಪಹೊತ್ತಿಗೆ ಮೊದಲು ಫ್ಲೈಓವರ್ ಏರುವಾಗ ಬಿಎಂಟಿಸಿ ಬಸ್ ಪಲ್ಟಿಯಾಗಿದ್ದು 22 ಜನರು ಗಾಯಗೊಂಡಿದ್ದಾರೆ. ಇವರಲ್ಲಿ 7 ಜನರ ಸ್ಥಿತಿ ಗಂಭೀರವಾಗಿದೆ.
ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗುತ್ತಿದೆ.