Kannada NewsKarnataka NewsLatest

*ಹಬ್ಬದ ದಿನವೇ ಘೋರ ದುರಂತ: ಕೆರೆಯಲ್ಲಿ ಮುಳಗಿ ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಕೆರೆಗೆ ಬಿದ್ದು ತಂದೆ, ಮಗಳು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಯರೇಕಟ್ಟೆ ಗ್ರಾಮದಲ್ಲಿ ನಡೆದಿದೆ

ಮೃತಪಟ್ಟವರನ್ನು ಯರೇಕಟ್ಟೆ ಗ್ರಾಮದ ವೆಂಕಟೇಶ್ (47), ಮಗಳು ಶ್ರಾವ್ಯ (12) ಹಾಗೂ ವೆಂಕಟೇಶ್ ಅಣ್ಣನ ಮಗನ ಮಗಳು ಪುಣ್ಯ (11) ಎಂದು ಗುರುತಿಸಲಾಗಿದೆ.

ಮಂಗಳವಾರ ಸಂಜೆ ಕೆರೆ ಕಡೆ ಮೂವರು ಹೋಗಿದ್ದಾರೆ. ಕೆರೆಯಲ್ಲಿ ನೀರು ಮುಟ್ಟಲು ಹೋಗಿ ಶ್ರಾವ್ಯ ಹಾಗೂ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಮತ್ತೊಬ್ಬಳು ಬುದ್ಧಿಮಾಂದ್ಯಳಾಗಿದ್ದು ಮನೆಗೆ ಬಂದು ಕೆರೆಗೆ ಬಿದ್ದಿರುವ ವಿಷಯ ತಿಳಿಸಿದ್ದಾರೆ. ಕೂಡಲೇ ವೆಂಕಟೇಶ್ ಹಾಗೂ ಮಂಜುನಾಥ್ ರಕ್ಷಣೆಗೆ ತೆರಳಿದ್ದಾರೆ. ಈ ವೇಳೆ ವೆಂಕಟೇಶ್ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಮೂವರು ದುರಂತ ಅಂತ್ಯ ಕಂಡಿದ್ದಾರೆ.

ವೆಂಕಟೇಶ್ ಹಾಗೂ ಶ್ರಾವ್ಯ ಮೃತಪಟ್ಟಿದ್ದರೆ, ಪುಣ್ಯ ಹುಳಿಯಾರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಈ ಸಂಬಂಧ ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button