Belagavi NewsBelgaum NewsKannada NewsKarnataka NewsNational

*ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯೋಧ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ.

ನರೇಶ್ ಯಲ್ಲಪ್ಪ ಆಗಸರ (28) ಮೃತ ಯೋಧ. ಚೆನ್ನಮ್ಮನ ಕಿತ್ತೂರು ತಾಲೂಕು ದೇಗಾಂವ ಗ್ರಾಮದ ನರೇಶ್ ಕಳೆದ ಐದು ವರ್ಷಗಳಿಂದ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ 20 ದಿನಗಳ ಹಿಂದೆ ರಜೆ ಮೇಲೆ ದೇಗಾಂವ ಗ್ರಾಮಕ್ಕೆ ಬಂದಿದ್ದರು. ರಜೆ ಮುಗಿಸಿ ನವೆಂಬರ್ 24ರಂದು ಸೇನಾ ಕರ್ತವ್ಯಕ್ಕೆ ಹಾಜರಾಗಬೇಕಾಗಿತ್ತು.

ಆದರೆ ಇದೀಗ ಅವರು ಪರಸನಟ್ಟಿ ಗ್ರಾಮದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಬೆನ್ನಲ್ಲೇ ಹಲವಾರು ಸಂದೇಹಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಪಿಎಸ್‌ಐ ಪ್ರವೀಣ ಗಂಗೋಳ, ಪ್ರವೀಣ ಕೋಟಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

Related Articles

Back to top button