
ಪ್ರಗತಿವಾಹಿನಿ ಸುದ್ದಿ: ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಹಾಗೂ ಸಾಕು ನಾಯಿ ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಬೋನಸಪುರ ಗ್ರಾಮದಲ್ಲಿ ನಡೆದಿದೆ.
ಸ್ವಪ್ನ (48) ಮೃತ ದುರ್ದೈವಿ. ಸ್ವಪ್ನ ಅವರ ಮಗ ಜ್ಞಾನೇಶ್ವರಗೆ (20) ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಲದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಾಕು ನಾಯಿಯು ಸಿಡಿಲಿಗೆ ಬಲಿಯಾಗಿದೆ. ಕುಂಚಾವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ