
ಪ್ರಗತಿವಾಹಿನಿ ಸುದ್ದಿ, ಲಕ್ನೋ: ತವರು ಮನೆಗೆ ಹೋಗಲು ಅವಕಾಶ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶದ ಬಲಿಯಾದಲ್ಲಿ ಈ ಘಟನೆ ನಡೆದಿದೆ. ನಿಶಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. 2022ರ ಡಿಸೆಂಬರ್ 2ರಂದು ಅವರು ನೌಕಾಪಡೆಯಲ್ಲಿರುವ ಅಮಿತ್ ಅವರನ್ನು ವಿವಾಹವಾಗಿದ್ದರು.
ತನ್ನ ಪತಿ ವಿವಾಹದ ರಜೆ ನಂತರ ಕರ್ತವ್ಯಕ್ಕೆ ಹಾಜರಾಗಲು ತೆರಳಿದಾಗ ನಿಶಾ ತವರಿಗೆ ಹೋಗಲು ಬಯಸಿದ್ದರು. ಆದರೆ ಇದಕ್ಕೆ ಅತ್ತೆ ಸಮ್ಮತಿಸಲಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿ ನಿಶಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ನಿಶಾ ತಂದೆ ಧೃವಪ್ರಸಾದ ವರ್ಮಾ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ