
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಗೋವಾವೇಸ್ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರರ ಕಂಚಿನ ಪುತ್ಥಳಿ ಸ್ಥಾಪನೆಯಾಗಲಿದೆ.
ಅಖಿಲ ಭಾರತ ವೀರಶೈವ ಮಹಾಸಭೆ ಬಸವೇಶ್ವರರ ಕಂಚಿನ ಪುತ್ಥಳಿ ಸ್ಥಾಪನೆಗೆ ನಿರ್ಧರಿಸಿದ್ದು, ಕಂಚಿನ ಪುತ್ಥಳಿ ಸ್ವರೂಪದ ಕುರಿತು ಚರ್ಚಿಸಲು ಪೂರ್ವಭಾವಿ ಸಭೆ ಆಯೋಜಿಸಿದೆ.
ಬುಧವಾರ (ಜ.13) ಬೆಳಗ್ಗೆ 10 ಗಂಟೆಗೆ ಶಿವಬಸವನಗರದ ಲಿಂಗಾಯತ ಭವನದಲ್ಲಿ ಸಭೆ ನಡೆಯುವುದು.
ಕಾರಂಜಿಮಠದ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಮತ್ತು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯವಹಿಸುವರು. ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅತಿಥಿಗಳಾಗಿ ಆಗಮಿಸಲಿದ್ದು, ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸುವರು.