ಕೋರ್ಟ್ ಆವರಣದಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ

ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ.

ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗೆ ಆಗಮಿಸಿದ್ದ ಮಹಿಳೆ ಮೇಲೆ ವಕಿಲರ ದಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ. ಅಪಾರ ಸಂಖ್ಯೆಯಲ್ಲಿದ್ದ ವಕಿಲರು, ಕಕ್ಷಿದಾರರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ.

ಹೊಟ್ಟೆಗೆ ಗುಂಡು ತಗುಲಿ ನರಳುತ್ತಿದ್ದ ಮಹಿಳೆಯನ್ನು ಕೋರ್ಟ್ ಆವರಣದಲ್ಲಿದ್ದ ಜನರು ಹಾಗೂ ಪೊಲೀಸರು ಸೇರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸಾಗಿಸಿದರು. ಕೌಟುಂಬಿಕ ಕಲಹ ಈ ಘಟನೆಗೆ ಕಾರಣ ಎನ್ನಲಾಗಿದೆ.

ಸಾಕೇತ್ ಕೋರ್ಟ್ ನಲ್ಲಿ ಈ ಹಿಂದೆಯೂ ಗುಂಡಿನ ದಾಳಿ ಪ್ರಕರಣಗಳು ನಡೆದಿದ್ದು ಅಲ್ಲಿನ ಭದ್ರತೆ ಹೆಚ್ಚಿಸಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಇದೇ ವೇಳೆ ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ರಾಜ್ಯದ ರಾಜಧಾನಿಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt
https://pragati.taskdun.com/pratap-simhasiddaramaiahv-somannavarunamysore/

https://pragati.taskdun.com/home-minister-amit-shah-put-an-end-to-decades-of-border-conflict/
https://pragati.taskdun.com/6-93-crore-worth-of-gold-silver-worship-accessories-seized/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button