Belagavi NewsBelgaum NewsKannada NewsKarnataka NewsLatest

*ಗೃಹಲಕ್ಷ್ಮೀ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ಮಹಿಳೆ* *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಸ*

ಪ್ರಗತಿವಾಹಿನಿ ಸುದ್ದಿ, ಗೋಕಾಕ: ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಹಣ ಕೂಡಿಟ್ಟು, ತನ್ನ ಮಗ ರಮೇಶ ನೀಲಪ್ಪ ಸಣ್ಣಕ್ಕಿಗೆ ದ್ವಿಚಕ್ರ ವಾಹನ ಕೊಡಿಸುತ್ತಿದ್ದಾರೆ.

ಶುಕ್ರವಾರ ಬೈಕ್ ಖರೀದಿಸಲು ಮುಂಗಡ ಹಣ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 9 ಗಂಟೆಗೆ ಗೋಕಾಕದಿಂದ ಬೈಕ್ ಪಡೆಯಲಿದ್ದಾರೆ.

‘ಗೃಹಲಕ್ಷಿ’ ಯೋಜನೆಯ ಹಣ ಇಂದು ಲಕ್ಷಾಂತರ ಮಹಿಳೆಯರ ಜೀವನದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಬದುಕು ಕಟ್ಟಿಕೊಳ್ಳಲು ನೆರವಾಗಿದೆ. ಮಹಾನವಮಿ (11/10/2024) ಹಬ್ಬದಂದು ದ್ವಿಚಕ್ರ ವಾಹನ ಕೊಳ್ಳಲು ಮುಂದಾಗಿರುವ ಮಗನಿಗೆ ತಾಯಿ ಗೃಹಲಕ್ಷ್ಮೀ ಹಣ ನೀಡಿರುವ ವಿಷಯ ಕೇಳಿ  ಖುಷಿಯಾಗಿದೆ. ತಾಯಿ -ಮಗನಿಗೆ ಮನಃಪೂರ್ವಕವಾಗಿ ಶುಭ ಕೋರುತ್ತೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಈ ಕುರಿತು ಸಚಿವರು ಅಭಿನಂದನಾ ಪತ್ರ ಕಳಿಸಿದ್ದಾರೆ.

ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ತಮ್ಮ ಮಗನಾದ ರಮೇಶ ನೀಲಪ್ಪ ಸಣ್ಣಕ್ಕಿ ಯವರಿಗೆ ದ್ವಿಚಕ ವಾಹನ ಖರೀದಿಸಲು ಮುಂಗಡ ಹಣವನ್ನು ತಾವು ನೀಡಿರುವ ವಿಷಯ ಕೇಳಿ ಇಲಾಖೆಯ ಮಂತ್ರಿಯಾದ ನನಗೆ ಅತೀವ ಖುಷಿ ತಂದಿದೆ. ಗೃಹಲಕ್ಷ್ಮೀ ಯೋಜನೆಯಿಂದ ರಾಜ್ಯದ ಮಹಿಳೆಯರು ಸಾವಲಂಬಿ ಜೀವನ ನಡೆಸುವುದರ ಜೊತೆಯಲ್ಲಿ ಮನೆಯ ಪುರುಷರಿಗೆ ಆರ್ಥಿಕ ವಾಗಿ ಸಹಾಯ ಮಾಡುತ್ತಿರುವುದು ನಿಜಕ್ಕೂ ಮಹಿಳೆಯರ ಪಾಲಿಗೆ ಹೆಮ್ಮೆಯ ವಿಚಾರವಾಗಿದೆ.

ವಿಜಯದಶಮಿ ಹಬ್ಬದ ಈ ಶುಭ ಸಂದರ್ಭದಲ್ಲಿ ತಮ್ಮ ಈ ಕಾರ್ಯವು ನಿಜಕ್ಕೂ ಶ್ಲಾಘನಿಯ. ಈ ಯೋಜನೆಯ ರೂವಾರಿಗಳಾದ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರರವರ ಮೇಲೆ ತಮ್ಮ ಪ್ರೀತಿ ವಿಶ್ವಾಸ ಹೀಗೆಯೇ ಮುಂದುವರಿಯಲೆಂದು ಬಯಸುತ್ತಾ, ತಮಗೆ ಈ ಮೂಲಕ ಹೊಸ ವಾಹನ ಖರೀದಿಸುತ್ತಿರುವ ಶುಭ ಸಂದರ್ಭದಲ್ಲಿ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನಾ ಪತ್ರ ಕಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button