Latest

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಂಠಪೂರ್ತಿ ಕುಡಿದು ಕಾರು ಚಲಾಯಿಸಿದ ವ್ಯಕ್ತಿ ಸರಣಿ ಅಪಘಾತ ಮಾಡಿದ್ದು, ಇನ್ಶುರೆನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾತನೊಬ್ಬನನ್ನು ಬಲಿಪಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ರಿಚ್ ಮಂಡ್ ವೃತ್ತದಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದ ಆರೋಪಿಯನ್ನು ರೋಹಿತ್ ಕೇಡಿಯಾ ಎಂದು ಗುರುತಿಸಲಾಗಿದೆ.

ಸರಣಿ ಅಪಘಾತದಲ್ಲಿ ಕಿರಣ್ (23) ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೋರ್ವ ಕಾರು ಚಾಲಕ ಶ್ರೀಕಾಂತ್‍ಗೆ ಗಾಯವಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರೋಹಿತ್ ಕೇಡಿಯಾ ಕಂಠಪೂರ್ತಿ ಕುಡಿದು ಕಾರು ಚಲಾಯಿಸಿಕೊಂಡು ಬಂದಿದ್ದಾನೆ. ನಂತರ ರಿಚ್ಮಂಡ್ ವೃತ್ತದ ಸಿಗ್ನಲ್ ಅಲ್ಲಿ ನಿಂತಿದ್ದ ಬೈಕಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬೈಕ್ ಸವಾರ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಕಾರು ನಿಯಂತ್ರಣಕ್ಕೆ ಸಿಗದೆ, ಮೊತ್ತೊಂದು ಕಾರಿಗೂ ಡಿಕ್ಕಿ ಹೊಡೆದಿದ್ದಾನೆ. ಅದರಲ್ಲಿದ್ದ ಕಾರು ಚಾಲಕ ಶ್ರೀಕಾಂತ್‍ ಎಂಬಾತನಿಗೆ ಗಂಭೀರವಾಗಿ ಗಾಯಗಳಾಗಿವೆ.

Home add -Advt

ಆರೋಪಿ ರೋಹಿತ್ ಕೇಡಿಯಾನನ್ನು ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ನ್ಯಾಯಾಧೀಶರು ಆರೋಪಿಯನ್ನು 14 ದಿನ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶ ನೀಡಿದ್ದಾರೆ.

Related Articles

Back to top button