Karnataka News

*ಧಗದಗನೆ ಹೊತ್ತಿ ಉರಿದ ವುಡ್ ಕಾರ್ಖಾನೆ*

ಪ್ರಗತಿವಾಹಿನಿ ಸುದ್ದಿ: ಹೊಸೂರು-ಬೆಂಳೂರು ಮುಖ್ಯ ರಸ್ತೆಯಲ್ಲಿರುವ ಯಡವನಹಳ್ಳಿ ಶ್ರೀ ರಾಮ್ ವುಡ್ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೋಟ್ಯಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಇರುವ ಶ್ರೀರಾಮ್ ವುಡ್ ಫ್ಯಾಕ್ಟರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಇನ್ನು ಹೆದ್ದಾರಿಗೆ ಹೊಂದಿಕೊಂಡಿರುವ ಹಿನ್ನೆಲೆ ಆತಂಕ ಮೂಡಿಸಿದೆ. ಭಾರೀ ಪ್ರಮಾಣದಲ್ಲಿ ಬೆಂಕಿಯ ಕೆನ್ನಾಲಿಗೆ ಆವರಿಸಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಯಶಸ್ವಿಯಾಗಿದ್ದಾರೆ.

ಶ್ರೀರಾಮ್ ವುಡ್ ಫ್ಯಾಕ್ಟರಿ ಹರ್ಷದ್ ಪಟೇಲ್ ಎಂವವರಿಗೆ ಸೇರಿದ ಕಾರ್ಖಾನೆ ಇದ್ದಾಗಿದ್ದು, ಸುಮಾರು ಐದು ಕೋಟಿಗೂ ಹೆಚ್ಚು ಬೆಲೆ ಬಾಳುವ ಮರಮಟ್ಟು ಬೆಂಕಿಗೆ ಆಹುತಿಯಾಗಿದೆ ಎಂದು ವರದಿಯಾಗಿದೆ. ಸದ್ಯ ಘಟನೆ ಸಂದರ್ಭದಲ್ಲಿ ಒಳಗಡೆ ಯಾರೂ ಇಲ್ಲ ಎನ್ನುವ ಮಾಹಿತಿ ಸಿಕ್ಕಿದ್ದುಅಧಿಕೃತ ಮಾಹಿತಿ ಸಿಕ್ಕ ಬಳಿಕವಷ್ಟೇ ಸ್ಪಷ್ಟವಾಗಲಿದೆ.

Home add -Advt

Related Articles

Back to top button