ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಭರ್ಜರಿಯಾಗಿ ಮದ್ಯ ಮಾರಾಟವಾಗಿದೆ. ಆದರೆ ಮದ್ಯ ಸಿಗದಿದ್ದಕ್ಕೆ ಮನನೊಂದು ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ 23 ವರ್ಷದ ಯುವಕನೊಬ್ಬ ಸರತಿ ಸಾಲಲ್ಲಿ ನಿಂತರೂ ಎಣ್ಣೆ ಸಿಗದ ಕಾರಣ ಮನನೊಂದಿದ್ದ. ಇದರಿಂದ ಮೈ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾನೆ.
ಬಾಡಿಗೆ ಮನೆಯಲ್ಲಿ ವಾಸವಿದ್ದ ಯುವಕ ಆತ್ಮಹತ್ಯೆಗೆ ಯತ್ನಿಸಿದ ವಿಚಾರ ತಿಳಿಯುತ್ತಿದ್ದಂತೆ ನೆರೆಹೊರೆಯವರು ಬೆಂಕಿ ನಂದಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ. ಶೇ.50 ರಷ್ಟು ದೇಹ ಸುಟ್ಟು ಹೋಗಿದ್ದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ.
ಬರೋಬ್ಬರಿ 41 ದಿನಗಳಿಂದ ಮದ್ಯ ಸಿಗದೆ ಕಂಗಾಲಾಗಿದ್ದ ಮದ್ಯ ಪ್ರಿಯರಿಗೆ ಲಾಕ್‍ಡಾನ್ ಸಡಿಲಿಕೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮದ್ಯ ಲಭ್ಯವಾಗಿದೆ. ರಾಜ್ಯಾದ್ಯಂತ ಒಂದೇ ದಿನ 45 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ