Kannada NewsKarnataka NewsLatest

*ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ: ಐವರ ಬಾಳಲ್ಲಿ ಬೆಳಕು*

ಪ್ರಗತಿವಾಹಿನಿ ಸುದ್ದಿ: ಅಪಘಾತದಿಂದ ತೀವ್ರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡಿದ್ದ 18 ವರ್ಷದ ಯುವತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಆಕೆಯ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 

ಈ ಹೃದಯಸ್ಪರ್ಶಿ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಸೀಕೆರೆ ತಾಲೂಕಿನ ಕಾರೇಹಳ್ಳಿ ಗ್ರಾಮದ ನಿವಾಸಿ ಮೋನಿಕಾ (18) ಅಪಘಾತಕ್ಕೀಡಾದ ದುರ್ದೈವಿ. 

ಈಕೆ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದರು. ಏಪ್ರಿಲ್ 5 ರಂದು ಸಂಜೆ ಸುಮಾರು 6:30ರ ಸಮಯದಲ್ಲಿ ಬಿ.ಹೆಚ್ ರಸ್ತೆಯ ಎಪಿಎಂಸಿ ಮಾರುಕಟ್ಟೆ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೋನಿಕಾ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ತಲೆಗೆ ಬಲವಾದ ಏಟು ಬಿದ್ದಿದ್ದರಿಂದ ಮೋನಿಕಾ ಅವರ ಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮಿದುಳು ನಿಷ್ಕ್ರಿಯ ಸ್ಥಿತಿಗೆ ತಲುಪಿದ್ದಾರೆ ಎಂದು ವೈದ್ಯರು ಪೋಷಕರಿಗೆ ತಿಳಿಸಿದರು. 

Home add -Advt

ಮಗಳ ಅಗಲಿಕೆಯ ಅತೀವ ನೋವಿನಲ್ಲೂ ಧೈರ್ಯಗೆಡದ ಪೋಷಕರು, ಆಕೆಯ ಅಂಗಾಂಗಗಳನ್ನು ದಾನ ಮಾಡಲು ಒಪ್ಪಿಗೆ ನೀಡಿದರು. ಮೋನಿಕಾ ಅವರ ಈ ಅಂಗಾಂಗ ದಾನದಿಂದಾಗಿ ಇದೀಗ ಐವರು ವ್ಯಕ್ತಿಗಳಿಗೆ ಹೊಸ ಜೀವನ ಲಭಿಸಿದಂತಾಗಿದೆ.

Related Articles

Back to top button