Latest

*ಬೆಳಗಾವಿ: ಪಬ್ ನಿಂದ ಜಿಗಿದು ಯುವಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಕುಡಿದ ಅಮಲಿನಲ್ಲಿ ಯುವಕನೊಬ್ಬ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಸಾವನ್ನಪ್ಪಿರುವ ಘಟನೆ ಬೆಳಗಾವಿ ನಗರದ ಡಾ.ಅಂಬೇಡ್ಕರ್ ರಸ್ತೆಯ ತಮ್ಮಣ್ಣ ಆರ್ಕೆಡ್ ನಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ 28 ವರ್ಷದ ಯೋಗೇಶ್ ಶಾನಭಾಗ ಮೃತ ಯುವಕ. ಸ್ನೇಹಿತರೊಂದಿಗೆ ಬ್ರೂ 59 ಪಬ್ ಗೆ ಬಂದಿದ್ದ. ಈ ವೇಳೆ ಕುಡಿದ ಅಮಲಿನಲ್ಲಿ ಪಬ್ ನ ಕಿಟಕಿ ಬಳಿ ಬಂದು ಏಕಾಏಕಿ ಕಟ್ಟಡದಿಂದ ಕೆಳಗೆ ಜಿಗಿದಿದ್ದಾನೆ ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಯೋಗೇಶ್ ಶಾನಭಾಗನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿಎಸ್ ಸಿ ಮೂಲಕ ಆಧಾರ್ ಸೇವೆ ಸರಳ: ಗಜಾನನ ನಾಯ್ಕ

Home add -Advt

Related Articles

Back to top button