Belagavi NewsBelgaum NewsKannada NewsKarnataka News

ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಉತ್ತರ ಪ್ರದೇಶ ಮೂಲದ ಯುವಕ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೆಲ ದಿನಗಳ ಹಿಂದೆ ತಾನು ಮದುವೆ ಆಗಬೇಕಿದ್ದ ಯುವತಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆ ಮನನೊಂದು ಉತ್ತರ ಪ್ರದೇಶದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.‌ 

ಯುವಕ-ಯುವತಿಗೆ ವಿವಾಹ ನಿಶ್ಚಯವಾಗಿತ್ತು, ಆದರೆ, ಮದುವೆಯಾಗುವ ಮುನ್ನವೇ ಯುವತಿಗೆ ಆರೋಗ್ಯ ಸಮಸ್ಯೆ ಎದುರಾಗಿದೆ. ಹಾಗಾಗಿ ಯುವತಿ ವೈದ್ಯರ ಬಳಿ ಹೋಗಿದ್ದಳು. ಮುಂದೆ ಎದುರಾಗುವ ಸಂಕಟಕ್ಕೆ ವೈದ್ಯರ ಬಳಿ ತಪಾಸಣೆ ನಡೆಸಿದಾಗ ಅವಳಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು. ಉತ್ತರ ಪ್ರದೇಶದ ಫತೇಪುರದಲ್ಲಿ ಮದುವೆಯಾಗಬೇಕಿದ್ದ ಯುವತಿ ಮನನೊಂದ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಉತ್ತರ ಪ್ರದೇಶ ಮೂಲದ ಯುವಕ ಕೂಡಾ  ಬೆಳಗಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Home add -Advt

ಬೆಳಗಾವಿಯಲ್ಲಿ ಬಟ್ಟೆ ವ್ಯಾಪಾರದ ಸಲುವಾಗಿ ನೆಲೆಸಿದ್ದ 27 ವರ್ಷದ ತರುಣ ಆವೇಶ್ ಜುಬೇರ ಪಠಾಣ ಬೆಳಗಾವಿಯ ಚಿರಾಗ್ ನಗರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗಾವಿ ಖಡೇ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button