ವಿಳಾಸದ ಪುರಾವೆಯಿಲ್ಲದ ಲೈಂಗಿಕ ಕಾರ್ಯಕರ್ತರಿಗೂ ಸಿಗಲಿದೆ ಆಧಾರ್ ಕಾರ್ಡ್; ದಾಖಲೆಗೆ ಏನು ಕೊಡಬೇಕು ಗೊತ್ತೆ?

 ಪ್ರಗತಿವಾಹಿನಿ ಸುದ್ದಿ, ನವದೆಹಲಿ :  ಸರ್ಕಾರದ ಅನೇಕ ಸೇವೆಗಳ ಜೊತೆಗೆ ಖಾಸಗಿ ಸೇವೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಪಡೆಯುವುದು ಅನಿವಾರ್ಯ. ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಪಡೆಯುವುದು ಕಷ್ಟದ ಮಾತಾಗಿತ್ತು. ಆದರೆ ಈಗ ವರ್ಕರ್ಸ್ ವಿಷಯದಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನಿಯಮಗಳನ್ನು ಸಡಿಲಗೊಳಿಸಿದೆ.
ಲೈಂಗಿಕ ಕಾರ್ಯಕರ್ತರು ಇನ್ಮುಂದೆ ಸುಲಭವಾಗಿ ಆಧಾರ್ ಕಾರ್ಡ್ ಪಡೆಯಬಹುದು. ಆಧಾರ್ ಕಾರ್ಡ್ ನೀಡುವುದಕ್ಕಾಗಿ ಬೇರೆ ಯಾವುದೇ ವಿಳಾಸ ಪ್ರಮಾಣಪತ್ರ ನೀಡಬೇಕಾಗಿಲ್ಲ.
ಈಗ ಸೆಕ್ಸ್ ವರ್ಕರ್ಸ್  ಗೆ ಸಂಬಂಧಿಸಿದಂತೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಮಹತ್ವದ ಹೇಳಿಕೆಯೊಂದನ್ನು ನೀಡಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ  ನೀಡುವ ಪ್ರಮಾಣಪತ್ರದ ಆಧಾರದ ಮೇಲೆ ಲೈಂಗಿಕ ಕಾರ್ಯಕರ್ತರಿಗೆ ಆಧಾರ್ ಕಾರ್ಡ್‌ಗಳನ್ನು ನೀಡುವುದಾಗಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ  ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button