ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಆಧಾರ್ ಗೆ ಪ್ಯಾನ್ ಸಂಖ್ಯೆ ಲಿಂಕ್ ಮಾದುವ ಅವಧಿಯನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.
ಶಾಶ್ವತ ಖಾತೆ ಸಂಖ್ಯೆ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವ ಗಡುವನ್ನು ಕೇಂದ್ರ ಸರ್ಕಾರ ಜೂನ್ 30, 2023ರವರೆಗೆ ವಿಸ್ತರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಒಂದು ವೇಳೆ ಜೂನ್ 30ರೊಳಗೆ ಆಧಾರ್-ಪ್ಯಾನ್ ಲಿಂಕ್ ಮಾಡದಿದ್ದರೆ ಜುಲೈ1, 2023 ರಿಂದ ಲಿಂಕ್ ಮಾಡದ ಎಲ್ಲಾ ಪ್ಯಾನ್ ಕಾರ್ಡ್ ಗಳು ನಿಷ್ಕ್ರಿಯಗೊಳ್ಳುತ್ತವೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ