Latest

*ಕೇಸ್ ದಾಖಲಿಸಬೇಡಿ ಎಂದ ಯಡಿಯೂರಪ್ಪ; ಮಾಜಿ ಸಿಎಂ ಮನೆ ಮೇಲೆ ಕಲ್ಲು ತೂರಾಟ ಪ್ರಕರಣದ ಬಗ್ಗೆ ಗೃಹ ಸಚಿವರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸದ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಬೇಡಿ ಎಂದು ಯಡಿಯೂರಪ್ಪನವರು ಹೇಳುತ್ತಿದ್ದಾರೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಕೇಸ್ ದಾಖಲಿಸಬೇಡಿ ಎಂದು ಯಡಿಯೂರಪ್ಪ ಹೇಳಿದ್ದಾರೆ. ಆದರೆ ಕಲ್ಲುತೂರಾಟದ ವೇಳೆ ಕೆಲವು ಪೊಲೀಸರಿಗೆ ಪೆಟ್ಟುಇ ಬಿದ್ದಿದೆ. ಪ್ರತಿಭಟನೆ ಶಾಂತಿಯುತವಾಗಿ ನಡೆಸಲಿ ಆದರೆ ಉದ್ರಿಕ್ತರು ಕಾನೂನು ಕೈಗೆತ್ತಿಕೊಂಡು ಕಲುತೂರಾಟ ನಡೆಸಿರುವುದು ಸರಿಯಲ್ಲ. ಯಡಿಯೂರಪ್ಪನವರ ಮನೆ ಮೇಲೆ, ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ. ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದರು.

Home add -Advt

ಕಲ್ಲುತೂರಾಟ ಗಲಾಟೆಯಲ್ಲಿ ಕೆಲ ಕ್ರಿಮಿನಲ್ ಹಿನ್ನೆಲೆಯುಳ್ಳವರೂ ಇದ್ದಾರೆ. ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಕೆಲ ರಾಜಕೀಯ ದುರುದ್ದೇಶದಿಂದಲೂ ಇಂತಹ ಘಟನೆಗಳು ನಡೆದಿರುವ ಸಾಧ್ಯತೆ ಇದೆ. ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

Related Articles

Back to top button