Kannada NewsKarnataka News

ಪಕ್ಷಕ್ಕೆ ನಿಷ್ಠೆ ದೌರ್ಭಲ್ಯವಲ್ಲ – ಶಾಸಕ ಅಭಯ ಪಾಟೀಲ ಆಕ್ರೋಶ

ತೀವ್ರ ನೋವು ತೋಡಿಕೊಂಡ ಶಾಸಕ ಅಭಯ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯ ಬಿಜೆಪಿ ಸರಕಾರದ ನಡೆಯ ಬಗ್ಗೆ ಬೆಳಗಾವಿ ಶಾಸಕ ಅಭಯ ಪಾಟೀಲ ತೀವ್ರ ನೋವು ತೋಡಿಕೊಂಡಿದ್ದಾರೆ. ಜೊತೆಗೆ ಇವೆಲ್ಲ ತಾತ್ಕಾಲಿಕ ಎನ್ನುವ ಸಮಾಧಾನವನ್ನೂ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಚಾರಕ್ಕೆ ಬದ್ಧತೆ ಮತ್ತು ಪಕ್ಷಕ್ಕೆ ನಿಷ್ಠೆ ಇದು ದೌರ್ಭಲ್ಯವಲ್ಲ ಎನ್ನುವ ಎಚ್ಚರಿಕೆ ಸಂದೇಶವನ್ನೂ ಬಿಜೆಪಿಗೆ ಮತ್ತು ಮುಖ್ಯಮಂತ್ರಿಗಳಿಗೆ ನೀಡಿದ್ದಾರೆ.

ಸ್ಥಾನ ಪಡೆಯಲು ಅನ್ಯ ಮಾರ್ಗ ಅನುಸರಿಸದೆ ಪಕ್ಷಕ್ಕೆ ನಿಷ್ಠೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ ಎನ್ನುವುದು ತಾತ್ಕಾಲಿಕ. ಇಂದಿನ ನಡೆ ವಿಷಾದಕರ ಸಂಗತಿ ಎಂದು ಅಭಯ ಪಾಟೀಲ ತೀವ್ರ ನೋವು ತೋಡಿಕೊಂಡಿದ್ದಾರೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button