Belagavi NewsBelgaum NewsElection NewsKannada NewsKarnataka NewsPolitics

ಗೋವಾ ಸ್ಟಾರ್ ಕ್ಯಾಂಪೇನರ್ ಆಗಿ ಅಭಯ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋವಾ ರಾಜ್ಯದ ಚುನಾವಣಾ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಬೆಳಗಾವಿ ಶಾಸಕ ಅಭಯ ಪಾಟೀಲ ಹೆಸರು ಸೇರ್ಪಡೆಯಾಗಿದೆ.

 ಗೋವಾ ರಾಜ್ಯದ ಬಿಜೆಪಿ ಅಧ್ಯಕ್ಷ ಸದಾನಂದ ತನವಡೆ ಅವರು ಶನಿವಾರ ಸ್ಟಾರ್ ಕ್ಯಾಂಪೇನರ್  ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಪ್ರಮುಖರು ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿದ್ದು, ಬೆಳಗಾವಿ ದಕ್ಷಿಣ ಮತಕ್ಷೇತ್ರ ಶಾಸಕ ಅಭಯ ಪಾಟೀಲ ಹೆಸರು ಸಹ ಸೇರಿದೆ.

ಅಭಯ ಪಾಟೀಲ ಅವರನ್ನು ಈಗಾಗಲೆ ಬಿಜೆಪಿ ತೆಲಂಗಾಣ ರಾಜ್ಯದ ಚುನಾವಣಾ ಉಸ್ತುವಾರಿಯಾಗಿ ನೇಮಕ ಮಾಡಿದೆ. ಅದರೊಂದಿಗೆ ಇದೀಗ ಅವರಿಗೆ ಮತ್ತೊಂದು ಪ್ರಮುಖ ಜವಾಬ್ದಾರಿ ನೀಡಲಾಗಿದೆ.

Related Articles

Back to top button