Kannada NewsKarnataka NewsLatest

5 ಸಾವಿರ ಮನೆ ನಿರ್ಮಾಣಕ್ಕೆ ಬೇಡಿಕೆ; 3800ಕ್ಕೆ ತಾಂತ್ರಿಕ ಒಪ್ಪಿಗೆ -ಅಭಯ ಪಾಟೀಲ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 

ಬೆಳಗಾವಿ ದಕ್ಷಿಣ ವಿಧಾನಸಭೆ ಕ್ಷೇತ್ರದಲ್ಲಿ ವಸತಿ ಇಲ್ಲದವರಿಗೆ 5 ಸಾವಿರ ಮನೆಗಳನ್ನು ನಿರ್ಮಾಣ ಮಾಡುವಂತೆ ಶಾಸಕ ಅಭಯ ಪಾಟೀಲ ವಸತಿ ಇಲಾಖೆಗೆ ಬೇಡಿಕೆ ಸಲ್ಲಿಸಿದ್ದು, 3,800 ಮನೆಗಳ ನಿರ್ಮಾಣಕ್ಕೆ ತಾಂತ್ರಿಕ ಒಪ್ಪಿಗೆ ಸಿಕ್ಕಿದೆ.

ಗುರುವಾರ ಬೆಂಗಳೂರಿನಲ್ಲಿ ವಸತಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರು  ಅನ್ಬುಕುಮಾರ್ ರವರನ್ನು ಭೇಟಿ ಮಾಡಿ ಈ ಸಂಬಂಧ ಶಾಸಕರು ಚರ್ಚಿಸಿದರು.

ಶಹಾಪುರ, ವಡಗಾವಿ, ಅನಗೋಳ ಭಾಗಗಳಲ್ಲಿ ಜಿ+2 ಹಾಗೂ ಜಿ+3 ಮಾದರಿಯಲ್ಲಿ ಸುಮಾರು 2000 ಮನೆಗಳ ನಿರ್ಮಾಣಕ್ಕೆ ತಾಂತ್ರಿಕ ಒಪ್ಪಿಗೆಗೆ ಕಳಿಸಲಾಗಿದೆ. ಎರಡನೆಯ ಹಂತದಲ್ಲಿ ಸುಮಾರು 1800 ಮನೆಗಳ ನಿರ್ಮಾಣಕ್ಕೆ ವಸತಿ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕರು ಅನುಮೋದನೆ ನೀಡಿದ್ದಾರೆ. ಒಂದು ವಾರದಲ್ಲಿ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಅಭಯ ಪಾಟೀಲ ಪ್ರಗತಿವಾಹಿನಿಗೆ ತಿಳಿಸಿದರು.

ಜುಲೈ 5ರಂದು ಅನ್ಬುಕುಮಾರ ಬೆಳಗಾವಿಗೆ ಆಗಮಿಸಲಿದ್ದು, ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಬರುವ ಉದ್ಯಮಭಾಗ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಆಟೋ ಚಾಲಕರು ಹಾಗೂ ವಡಗಾವಿ ಭಾಗದ ನೇಕಾರರು, ಕೂಲಿ ಕಾರ್ಮಿಕರು, ಮತ್ತು ಮದ್ಯಮ ವರ್ಗ ಜನರಿಗೆ ಈ ವಸತಿ ನಿರ್ಮಾಣದ ಯೋಜನೆಯಡಿಯಲ್ಲಿ ಮನೆ ಕಟ್ಟಿ ಕೊಡುವ ಉದ್ದೇಶವಾಗಿದೆ.

ಅಂದಿನ ಸಭೆಯಲ್ಲಿ ಕಾರ್ಮಿಕ ಇಲಾಖೆ, ಬುಡಾ, ಮಹಾನಗರ ಪಾಲಿಕೆ, ಕಂದಾಯ ಇಲಾಖೆ ಮುಂತಾದ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರುವರು. ಬರುವ ಅಗಸ್ಟ್ ತಿಂಗಳಿನಿಂದ ಈ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button