ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಮೂರನೇ ಆರೋಪಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಸಿಸಿಇ ಕಸ್ಟಡಿಗೆ ನೀಡಲಾಗಿದೆ.
ಒಡಿಶಾದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆ ತಂದ ಸಿಸಿಬಿ ಪೊಲೀಸರು ಅಭಿನವ ಹಾಲಶ್ರೀಯನ್ನು ಕೋರ್ಟ್ ಗೆ ಹಾಜರು ಪಡಿಸಿದ್ದರು. ಈ ವೇಳೆ ವಿಚರಣೆಗಾಗಿ ಕಸ್ಟಡಿಗೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಹತ್ತು ದಿನಗಳ ಕಾಲ ಸೆ.29ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 19ನೇ ಎಸಿಎಂಎಂ ನ್ಯಯಾಲಯ ಆದೇಶ ನೀಡಿದೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬಂಧನವಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಅಭಿನವ ಹಾಲಶ್ರೀ ಒಡಿಶಾದ ಕಟಕ್ ನಲ್ಲಿ ರೈಲಿನಲ್ಲಿ ತೆರಳುತ್ತಿದ್ದ ವೇಳೆ ಒಡಿಶ ಅಪೊಲೀಸರ ಸಹಾಯ ಪಡೆದು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ