ಪ್ರಗತಿವಾಹಿನಿ ಸುದ್ದಿ: ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣದಲ್ಲಿ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ಸೋನಾಲಿ(33) ಎಂಬ ಮಹಿಳೆ ಮೀರಜ್ ನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಸ್ಕ್ಯಾನಿಂಗ್ ಮಾಡಿಸಿದ್ದ ವೇಳೆ ಹೆಣ್ಣುಮಗು ಇರುವುದು ಗೊತ್ತಾಗಿದೆ. ಅದಾಗಲೇ ಇಬ್ಬರು ಹೆಣ್ಣುಮಕ್ಕಳಿದ್ದ ಕಾರಣಕ್ಕೆ ಗರ್ಭಪಾತಕ್ಕೆ ನಿರ್ಧರಿಸಿ ಬಾಗಲಕೋಟೆಯ ಮಹಾಲಿಂಗಪುರಕ್ಕೆ ಆಗಮಿಸಿ ಗರ್ಭಪಾತ ಮಾಡಿಸಿಕೊಂಡಿದ್ದರು. ಈ ವೇಳೆ ತೀವ್ರ ರಕ್ತಸ್ರಾವದಿಂದ ಪ್ರಜ್ಞೆ ತಪ್ಪಿದ್ದ ಸೊನಾಲಿಯನ್ನು, ನಕಲಿ ಆಸ್ಪತ್ರೆಗೆ ಕರೆದಿಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದರು.
ಮೃತ ಸೊನಾಲಿ ಮೃತದೇಹವನ್ನು ಕಾರಲ್ಲಿ ತೆಗೆದುಕೊಂಡು ಹೋಗುವಾಗ ಗಡಿಯಲ್ಲಿ ಮೀರಜ್ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ ಕಾರಲ್ಲಿ ಮೃತದೇಹ ಪತ್ತೆಯಾಗಿದೆ. ಕಾರಿನಲ್ಲಿದ್ದವರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಮಹಾಲಿಂಗಪುರದ ಮನೆಯೊಂದರಲ್ಲಿ ಗರ್ಭಪಾತ ಮಾಡಲಾಗುತ್ತಿತ್ತು ಎಂಬ ಬಗ್ಗೆ ತಿಳಿದುಬಂದಿದೆ. ಮಹಾಲಿಂಗಪುರ ಆಸ್ಪತ್ರೆಯ ಮಾಜಿ ಆಯಾ ಕವಿತಾ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ