
ಪ್ರಗತಿವಾಹಿನಿ ಸುದ್ದಿ: ಕಟ್ಟಡದಲ್ಲಿ ಎಸಿ ಕಪ್ರೆಸರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.
ಇಲ್ಲಿನ ಫರಿದಾಬಾದ್ ಕಟ್ಟಡದಲ್ಲಿ ಈ ದುರಂತ ಸಂಭವಿಸಿದೆ. ಮೃತರನ್ನು ಸಚಿನ್ ಕಪೂರ್, ಪತ್ನಿ ರಿಂಕು ಕಪೂರ್, ಮಗಳು ಸುಜನ್ ಕಪೂರ್ ಎಂದು ಗುರುತಿಸಲಾಗಿದೆ.
ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಬೆಳಗಿನ ಜಾವ ಈ ದುರಂತ ಸಂಭವಿಸಿದೆ. ಕುಟುಂಬ ವಾಸವಾಗಿದ್ದ ಎರಡನೇ ಮಹಡಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದ್ದು, ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.