Kannada NewsKarnataka News
ಎಸಿ ಬ್ಲಾಸ್ಟ್: ಮೂವರಿಗೆ ಗಂಭೀರ ಗಾಯ

ಪ್ರಗತಿವಾಹಿನಿ ಸುದ್ದಿ: ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಬ್ಲಾಸ್ಟ್ ಆದ ಪರಿಣಾಮ ಮೂರು ಜನರಿಗೆ ಗಂಭೀರ ಗಾಯವಾಗಿರುವ ಘಟನೆ ಬಳ್ಳಾರಿಯ ಕಲ್ಯಾಣ್ ಜುವೆಲರ್ಸ್ ನಲ್ಲಿ ನಡೆದಿದೆ.
ಬಳ್ಳಾರಿಯ ಜೈನ್ ಮಾರ್ಕೇಟ್ ರಸ್ತೆಯಲ್ಲಿ ಇರುವ ಕಲ್ಯಾಣ ಜುವೆಲರ್ಸ್ ನಲ್ಲಿ ಏಕಾಏಕಿ ಎಸಿ ಬ್ಲಾಸ್ಟ್ ಆದ ಹೊಡೆತಕ್ಕೆ ಕಿಟಕಿಯ ಗಾಜುಗಳು ಒಡೆದು ಚಲ್ಲಾಪಿಲ್ಲಿಯಾಗಿದೆ. ಈ ಘಟನೆಯಲ್ಲಿ ಮೂರು ಜನರಿಗೆ ಗಂಭೀರ ಗಾಯಗಳಾಗಿದ್ದರೆ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಗಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಘಟನೆ ಆಗುತ್ತಿದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಎಸಿ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಶಾಪ್ ನಲ್ಲಿ ದಟ್ಟ ಹೊಗೆ ಆವರಿಸಿದ್ದು, ಷೋರೂಂ ಒಳಗ್ಗೆ ಇದ್ದ ಜನರನ್ನು ಹೊರ ತೆಗೆದಿದ್ದಾರೆ.




