ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಂಚಕ್ಕೆ ಬೇಡಿಕೆ ಇಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿ ಮೇಲೆಯೇ ಎಸಿಬಿ ಅಧಿಕಾರಿಗಳಿ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಕಚೇರಿ ಮ್ಯಾನೇಜರ್ ಮಹೇಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಹೇಶ್ ಜತೆ ಕ್ಲರ್ಕ್ ಚಂದ್ರು ಅವರನ್ನು ಬಂಧಿಸಲಾಗಿದೆ.
ಮ್ಯಾನೇಜರ್ ಮಹೇಶ್ 5 ಲಕ್ಷ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಎಸಿಬಿಗೆ ದೂರು ನೀಡಲಾಗಿತ್ತು. ಇಂದು ಹಣ ಪಡೆಯುತ್ತಿದ್ದಾಗಲೇ ದಿಢೀರ್ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಮಹೇಶ್ ನನ್ನು ಬಂಧಿಸಿದ್ದಾರೆ. ಅಲ್ಲದೇ ಡಿಸಿ ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಕಾಂಗ್ರೆಸ್ ನಲ್ಲಿ ಯೌವ್ವನ ನಿರ್ಧಾರವಾಗುವುದು 50 ರ ನಂತರವೇ?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ