Latest

ರಾಜ್ಯದ 7 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ 7 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿದ್ದು, ಒಟ್ಟು 30ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆದಿದೆ.

ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಕಲಬುರ್ಗಿ ಸೇರಿದಂತೆ ಹಲವೆಡೆಗಳಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Home add -Advt

ಬೆಂಗಳೂರು ಪ್ರಾಂತದ ಸಹಕಾರ ಸಂಘಗಳ ಜಂಟಿ ನಿಬಂಧಕ ಪಾಂಡುರಂಗ ಗರಗ್ ಮನೇಲೆ ದಾಳಿ ನಡೆಸಿರುವ ಅಧಿಕಾರಿಗಳಿಗೆ ಬೆಂಗಳೂರಿನ ವಿಜಯನಗರ ನಿವಾಸದಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಪತ್ತೆಯಾಗಿದೆ. ಪಾಂಡುರಂಗ ಅವರಿಗೆ ಸೇರಿದ 5 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸಣ್ಣ ನೀರಾವರಿ ಇಲಾಖೆಯ ಎಇಇ ದೇವರಾಜ್ ಅವರ ಶಿಗ್ಗಾವಿ ಮನೆ, ಹುಬ್ಬಳ್ಳಿ ಮನೆ, ಕೋಟಿ ಲಿಂಗೇಶ್ವರದಲ್ಲಿನ ನಿವಾಸದ ಮೆಲೂ ದಾಳಿ ನಡೆಸಲಾಗಿದೆ. ಧಾರವಾಡದ ಅರಣ್ಯ ಇಲಾಖೆ ಅಧಿಕಾರಿ ಎಸಿಎಫ್ ಶ್ರೀನಿವಾಸ್, ಕೋಲಾರ ಡಿ ಹೆಚ್ ಒ ಡಾ.ವಿಜಯ್ ಕುಮಾರ್, ಮಂಗಳೂರು ಪಾಲಿಕೆ ಟಿಪಿಒ ಜಯರಾಜ್ ಸೇರಿದಂತೆ ಹಲವು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆದಿದೆ.

Related Articles

Back to top button