ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳು ಭ್ರಷ್ಟರಿಗೆ ಬಿಗ್ ಶಾಕ್ ನೀಡಿದ್ದಾರೆ. ಬಿಡಿಎ ಮಧ್ಯವರ್ತಿಗಳು, ಏಜೆಂಟ್‌ಗಳ ಮನೆ ಮೇಲೆ ಏಕಕಾಲದಲ್ಲಿ 9 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಿಡಿಎ ಅಧಿಕಾರಿಗಳ ಜತೆ ಸೇರಿ ಭ್ರಷ್ಟಾಚಾರ, ಅವ್ಯವಹಾರ ನಡೆಸಿದ್ದ ಆರೋಪ ಹಿನ್ನೆಲೆಯಲ್ಲಿ ಎಸಿಬಿ ಎಸ್ ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳಿಂದ, 9 ಕಡೆ ದಾಳಿ ನಡೆಸಲಾಗಿದೆ.
ಚಾಮರಾಜಪೇಟೆಯ ಬಿ.ಎನ್.ರಘು, ಆರ್ ಟಿ.ನಗರ ಬಳಿಯ ಮನೋರಾಯನಪಾಳ್ಯದ ಮೋಹನ್, ದೊಮ್ಮಲೂರಿನ ಮನೋಜ್, ಆರ್.ಆರ್.ನಗರದ ತೇಜು, ಮಲ್ಲತ್ತಹಳ್ಳಿಯ ಮುನಿರತ್ನ ಅಲಿಯಾಸ್ ರತ್ನವೇಲು, ಮುದ್ದಿನಪಾಳ್ಯದ ಅಶ್ವತ್ಥ್ ಹಾಗೂ ಚಿಕ್ಕಹನುಮಯ್ಯ, ಚಾಮುಂಡೇಶ್ವರಿನಗರದ ರಾಮು ಮತ್ತು ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್ನ ಲಕ್ಷ್ಮಣ ನಿವಾಸ ಹಾಗೂ ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ