Belagavi NewsBelgaum NewsKannada NewsKarnataka NewsWorld

*ಚುರುಕುಗೊಂಡ ಮುಂಗಾರು: 10 ಕ್ಕೂ ಹೆಚ್ಚು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಮುಂದಿನ 4 ದಿನಗಳ ಕಾಲ ಭಾರಿ ಮಳೆ ಆಗಲಿದೆ.10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 13ರವರೆಗೆ ಕರ್ನಾಟದ ಬಹುತೇಕ ಕಡೆ ಗಾಳಿಯ ಆರ್ಭಟ ಇರಲಿದೆ. ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಕೊಟ್ಟಿದ್ದು 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಸನ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಬಾಗಲಕೋಟೆ, ಕೊಪ್ಪಳ, ಗದಗ, ವಿಜಯಪುರ, ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಅದೇ ರೀತಿಯಾಗಿ ಬೆಳಗಾವಿ, ಬೀದ‌ರ್, ಧಾರವಾಡ, ಹಾವೇರಿ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳ ಸಾಧ್ಯತೆಯಿದೆ.

ಇನ್ನು ಆಗಸ್ಟ್ 11 ಹಾಗೂ 12 ರಂದು ಕರಾವಳಿ ಜಿಲ್ಲೆಗಳು, ರಾಯಚೂರು, ಗದಗ, ಕೊಪ್ಪಳ ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ಹಾಗೆಯೇ, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ರಾಮನಗರ, ಮೈಸೂರು, ಕೋಲಾರ, ಮಂಡ್ಯ ಮೈಸೂರು ಮುಂತಾದ ಕಡೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಯಬ್ಬರ ಕೊಂಚ ಮಟ್ಟಿಗೆ ತಗ್ಗಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Related Articles

Back to top button