Kannada NewsKarnataka NewsLatest

*ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪ; ಮುಖ್ಯಶಿಕ್ಷಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ.

ಚಿತ್ರಗುರ್ಗ ತಾಲೂಕಿನ ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಂಗಸ್ವಾಮಿ ಸಸ್ಪೆಂಡ್ ಆದವರು.

ಶಿಕ್ಷಕ ರಂಗಸ್ವಾಮಿ, ಶಾಲೆಯ ಶೌಚಾಲಯ ತೊಳೆಯುವ ಆಸಿಡ್ ನ್ನು 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಎಸೆದಿದ್ದಾರೆ. ಈ ಸಂಬಂಧ ಶಿಕ್ಷಕನ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದೀಗ ಡಿಡಿಪಿಐ ರವಿಶಂಕರ ರೆಡ್ಡಿ, ಮುಖ್ಯಶಿಕ್ಷಕ ರಂಗಸ್ವಾಮಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button