Kannada NewsKarnataka NewsLatest

*ಪಾದಯಾತ್ರೆಗೆ ತೆರಳಿದ ಭಕ್ತರ ಮೇಲೆ ಹರಿದ ಖಾಸಗಿ ಬಸ್: ಮೂವರು ಸಾವು*

ಪ್ರಗತಿವಾಹಿನಿ ಸುದ್ದಿ: ಹುಲಿಯಮ್ಮ ದೇವಸ್ಥಾನಕ್ಕೆ ಪಾದಯಾತ್ರೆಗೆ ತೆರಳಿದ ಭಕ್ತರ ಮೇಲೆ ಖಾಸಗಿ ಸ್ಲೀಪರ್ ಬಸ್ ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಳಕಿಗೆ ಬಂದಿದೆ.‌

ಇಂದು ಬೆಳ್ಳಂ ಬೆಳಗ್ಗೆ ಕೊಪ್ಪಳ ಜಿಲ್ಲೆಯ ಕೂಕನಪಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಘಟನೆ ನಡೆದಿದ್ದು, ವೇಗವಾಗಿ ಬಂದ ಖಾಸಗಿ ಬಸ್ ಎಲ್ಲರ ಮೇಲೂ ಹರಿದಿದ್ದು ಪರಿಣಾಮ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತಪಟ್ಟವರನ್ನು ಅನ್ನಪೂರ್ಣ (40), ಪ್ರಕಾಶ್ (25), ಶರಣಪ್ಪ (19 ಎಂದು ಗುರುತಿಸಲಾಗಿದೆ. ಮೃತರು ಗದಗ ಜಿಲ್ಲೆಯ ರೋಣ ತಾಲೂಕಿನ ತಳ್ಳಿಹಾಳ ಗ್ರಾಮದವರಾಗಿದ್ದು ಹುಲಿಗೆಮ್ಮ ದೇವಾಲಯದ ಪಾದಯಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ.

ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ವೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಕೊಪ್ಪಳ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ರಾಮ್ ಅರಸಿದ್ದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button