*ಭೀಕರ ಸರಣಿ ಅಪಘಾತ: ನಾಲ್ವರು ಬಾಲಕರು ಸಾವು*

ಪ್ರಗತಿವಾಹಿನಿ ಸುದ್ದಿ: ಲಾರಿ, ಕಾರು, ಬೈಕ್ ಗಳ ನಡುವೆ ಸಂಭವಿಸಿದ್ದ ಭೀಕರ ಅಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಇಲ್ಲಿನ ಗಾಳಿಪುರ ಬೈಪಾಸ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ನಲ್ಲಿದ್ದ ನಾಲ್ವರು ಅಪ್ರಾಪ್ತರು ಗಂಭೀರವಾಗಿ ಗಾಯಗೊಂಡಿದ್ದರು. ಓರ್ವ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಮೂವರು ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಕೂಡ ಕೊನೆಯುಸಿರೆಳೆದಿದ್ದಾರೆ. ಮೆರಾನ್, ರೆಹಾನ್, ಅದಾನ್ ಪಾಷಾ ಹಾಗೂ ಫೈಜಲ್ ಮೃತ ದುರ್ದೈವಿಗಳು. … Continue reading *ಭೀಕರ ಸರಣಿ ಅಪಘಾತ: ನಾಲ್ವರು ಬಾಲಕರು ಸಾವು*