TravelWorld

*ವಿಮಾನ ಹಾಗೂ ಹೆಲಿಕಾಪ್ಟರ್ ನಡುವೆ ಆಗಸದಲ್ಲೆ ಅಪಘಾತ*

ಪ್ರಗತಿವಾಹಿನಿ ಸುದ್ದಿ: ವಿಮಾನ ಹಾಗೂ ಹೆಲಿಕಾಪ್ಟರ್ ನಡುವೆ ಆಗಸದಲ್ಲೇ ಅಪಘಾತ ಸಂಭವಿಸಿ ಪ್ರಯಾಣಿಕರ ಸಮೇತ ವಿಮಾನ ನದಿಗೆ ಬಿದ್ದಿದ್ದು ಮೂವರು ಸಾವನ್ನಪ್ಪಿದ್ದಾರೆ.

ವಾಷಿಂಗ್ ಟನ್ ನ ರೆಗಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಬುಧವಾರ ರಾತ್ರಿ ಹೆಲಿಕಾಪ್ಟರ್ ಹಾಗೂ ವಿಮಾನ ಪರಸ್ಪರ ಡಿಕ್ಕಿ ಹೊಡೆದು ಪೊಟೋಮ್ಯಾಕ್ ನದಿಗೆ ಬಿದ್ದಿದೆ. ಘಟನೆಯಲ್ಲಿ ಕನಿಷ್ಟ ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎನ್ನಲಾಗಿದೆ

ಮಾಧ್ಯಮ ವರದಿಗಳ ಪ್ರಕಾರ, ವಿಮಾನ ನಿಲ್ದಾಣದ ಬಳಿ ಅಮೆರಿಕನ್ ಏರ್ಲೈನ್ಸ್ ಫ್ಲೈಟ್ 5342 ಮತ್ತು ಬ್ಲಾಕ್ ಹಾಕ್ ಹೆಲಿಕಾಪ್ಟ‌ರ್ ನಡುವೆ ಡಿಕ್ಕಿ ಸಂಭವಿಸಿದೆ ಎನ್ನಲಾಗುತ್ತಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Home add -Advt

Related Articles

Back to top button