*ಟ್ಯಾಂಕರ್ ಮತ್ತು ಟ್ರಕ್ ನಡುವೆ ಅಪಘಾತ: ಮೃತರ ಸಂಖ್ಯೆ 14ಕ್ಕೆ ಏರಿಕೆ*
ಪ್ರಗತಿವಾಹಿನಿ ಸುದ್ದಿ: ಭಂಕ್ರೋಟಾ ಅಜೀರ್ ರಸ್ತೆಯಲ್ಲಿ ಶನಿವಾರ ನಡೆದ ಟ್ಯಾಂಕರ್ ಟ್ರಕ್ ಡಿಕ್ಕಿ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.
ಈ ಬಗ್ಗೆ ಪಶ್ಚಿಮ ಜೈಪುರ ಡಿಸಿಪಿ ಅಮಿತ್ ಕುಮಾರ್ ಮಾಹಿತಿ ನೀಡಿದ್ದಾರೆ. ಕೆಮಿಕಲ್ ತುಂಬಿದ್ದ ಟ್ರಕ್, ಟ್ಯಾಂಕರ್ ಸೇರಿದಂತೆ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿತ್ತು, ಇದರಿಂದಾಗಿ ಸ್ಥಳದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿತ್ತು. ಘಟನೆ ವೇಳೆ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೇ 14 ಮಂದಿ ಮೃತಪಟ್ಟಿದ್ದಾರೆ. ಘಟನೆ ವೇಳೆ ಸುಮಾರು 28 ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಅವರಲ್ಲಿ 6 ಮಂದಿ ವೆಂಟಿಲೇಟರ್‌ಗಳಲ್ಲಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸಿದ್ದಾರೆ. ರಾಜಸ್ಥಾನದ ಜೈಪುರ – ಅಜೀರ್ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ. ಮೃತರ ಕುಟುಂಬಕ್ಕೆ 2 ಲಕ್ಷ ರೂ., ಗಾಯಗೊಂಡವರಿಗೆ 50,000 ರೂ.ವನ್ನು ಪರಿಹಾರವಾಗಿ ಘೋಷಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ