Belagavi NewsBelgaum News

*ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್ ಹಾಗೂ ಟಿಪ್ಪರ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಲಹಡಲಗಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಬೈಕ್ ಸವಾರ ಅಥಣಿಯಿಂದ ರಾಮತೀರ್ಥ ಗ್ರಾಮಕ್ಕೆ ಹೋಗುವಾಗ ಯಲಹಡಲಗಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ.

Home add -Advt

ಬೈಕ್ ಸವಾರ ರಾಮತೀರ್ಥ ಗ್ರಾಮದ ನಿವಾಸಿ ವಿಠ್ಠಲ ಖಂಡೆಕರ್ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Related Articles

Back to top button