LatestNationalPolitics

*ವಿಧಾನಸಭಾ ಸ್ಪೀಕರ್ ಗೆ ಬಾಂಬ್ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಇ-ಮೇಲ್ ಮೂಲಕ ಸ್ಪೀಕರ್ ವಿಜೇಂದರ್ ಗುಪ್ತಾ ಅವರುಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದದರೆ ಇದರಲ್ಲಿ ದೆಹಲಿ ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.

ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ ಎಂದು ತಿಳಿದುಬಂದಿದೆ.

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ಪತ್ತೆದಳ, ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ ನಡೆಸಲಾಗುತ್ತಿದೆ.

Related Articles

Back to top button