Kannada NewsKarnataka NewsLatest

*ಕುಕ್ಕೆಗೆ ಮದುವೆಗೆ ಹೊರಟ್ಟಿದ್ದ ವಾಹನ ಪಲ್ಟಿ: 20 ಜನರಿಗೆ ಗಾಯ*

ಪ್ರಗತಿವಾಹಿನಿ ಸುದ್ದಿ: ಕುಕ್ಕೆಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮದುವೆ ಸಮಾರಂಭಕ್ಕೆ ತೆರಳುತಿದ್ದ ವಾಹನ ಪಲ್ಟಿಯಾಗಿ 20ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದೆ.

ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿದೆ. ಕುಕ್ಕೆಯ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರಿನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು ವರ ಇಬ್ಬರೂ ನಿನ್ನೆಯೇ ಹಾಲ್‌ಗೆ ಬಂದಿದ್ದರು.

ಹುಡುಗನ ಕಡೆಯವರು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ತಿರುವಿನಲ್ಲಿ ವಾಹನ ಇಪ್ಪತ್ತಕ್ಕೂ ಅಧಿಕ ಅಡಿ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಪರಿಣಾಮವಾಗಿ, ಟೆಂಪೋದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.  ಅಘಘಾತದ ತೀವ್ರತೆಗೆ ಹಲವರಿಗೆ ಗಂಭೀರ ಗಾಯಗಳಾಗಿದೆ.  

ಬಿಸಿಲೆ ಘಾಟ್ ನಲ್ಲಿ ತಿರುವುಗಳು ಹೆಚ್ಚಾಗಿದ್ದು, ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಆಳವಾದ ಕಂದಕಗಳು ಇರುವುದರಿಂದ ವಾಹನಗಳು ಪ್ರಪಾತಕ್ಕೆ ಬೀಳುವ ಸಾಧ್ಯತೆ ಇದೆ. ಪ್ರವಾಸಿಗರು ಬಹಳ ಎಚ್ಚರಿಕೆಯಿಂದ ವಾಹನ ಚಲಾಯಿಸಿದರೆ ಇಂತಹ ಅವಘಡಗಳು ತಪ್ಪುತ್ತವೆ.

Home add -Advt

Related Articles

Back to top button