Latest

ಭೀಕರ ರಸ್ತೆ ಅಪಘಾತ; ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಪ್ರಗತಿವಾಹಿನಿ ಸುದ್ದಿ, ವಿಜಯಪುರ: ಇಲ್ಲಿನ ಕೊಲ್ಹಾರ ಕುಪಕಡ್ಡಿ ಬಳಿ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗಣೇಶ ಹಬ್ಬದ ದಿನವಾದ ಬುಧವಾರ ಸಂಜೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ.

ಕಲಬುರ್ಗಿ ಜಿಲ್ಲೆಯ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ(25), ಅವರ 3 ತಿಂಗಳ ಮಗಳು ಸುಮನ ಹಾಗೂ ಶರಣಮ್ಮ ಬಸವರಾಜ ಕಲಶೆಟ್ಟಿ (55) ಮೃತಪಟ್ಟವರು.

Home add -Advt

ಇಬ್ಬರು ಸ್ಥಳದಲ್ಲಿ ಅಸು ನೀಗಿದ್ದರೆ ಶರಣಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

ಗಂಭೀರವಾಗಿ ಗಾಯಗೊಂಡಿರುವ ಅದೇ ಕುಟುಂಬದ ಉಮೇಶ ಕಲಶೆಟ್ಟಿ ಹಾಗೂ ಸುರೇಖಾ ಕಲಶೆಟ್ಟಿ ಅವರನ್ನು ವಿಜಯಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಲ್ಹಾರ ಪೊಲೀಸ್ ಠಾಣೆ ಪಿಎಸ್ ಐ ಪ್ರೀತಮ್ ನಾಯಕ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ಮುಂದುವರಿದಿದೆ.

ಇಂದು ಮಧ್ಯಾಹ್ನ ಬೆಂಗಳೂರಿನಲ್ಲಿ ಮಳೆಹಾನಿ ಪರಿಶೀಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 

 

Related Articles

Back to top button