
ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಟಿಪ್ಪರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೇರಳ ಬಳಿಯ ಚೆಂಗಳ ನಾಲ್ಕನೇ ಮೈಲ್ ಲ್ಲಿ ಈ ದುರಂತ ಸಂಭವಿಸಿದೆ. ಸಜಿತ್ (38) ಮೃತ ಕಾನ್ಸ್ ಟೇಬಲ್. ಚೇರ್ವತ್ತೂರು ಮಾಯಿಚ್ಚಿ ನಿವಾಸಿ ಎಂದು ತಿಳಿದುಬಂದಿದೆ. ಕಾನ್ಸ್ ಟೇಬಲ್ ಸಜಿತ್ ಪ್ರಯಾಣಿಸುತ್ತಿದ್ದ ಆಲ್ಟೋ ಕಾರು ಹಾಗೂ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಸಜೀತ್ ಹಾಗೂ ಅವರೊಂದಿಗಿದ್ದ ಮತ್ತೋರ್ವ ಪೊಲೀಸ್ ಗಾಯಗೊಂಡಿದ್ದರು. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಿಸದೇ ಕಾನ್ಸ್ ಟೇಬಲ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.